Select Your Language

Notifications

webdunia
webdunia
webdunia
webdunia

ವಿಕೃತಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ತಡೆಯಾಜ್ಞೆ..

ವಿಕೃತಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ತಡೆಯಾಜ್ಞೆ..
ಬೆಂಗಳೂರು , ಗುರುವಾರ, 20 ಅಕ್ಟೋಬರ್ 2016 (12:11 IST)
ವಿಕೃತಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್‌ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. 

ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, 10 ದಿನಗಳಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಸಲ್ಲಿಸಿರುವ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.
 
1998 ಮಾರ್ಚ್ 2 ರಿಂದ ಜೈಲಿನಲ್ಲಿದ್ದು, ಏಕಾಂತ ಸೆರೆವಾಸ ಅನುಭವಿಸಿದ್ದೇನೆ. ನನ್ನ ಕ್ಷಮಾಧಾನ ಅರ್ಜಿಯನ್ನು ರಾಷ್ಟ್ರಪತಿಯವರು 2 ವರ್ಷ ಮೂರು ತಿಂಗಳ ಕಾಲ ವಿಳಂಬ ಮಾಡಿದ್ದಾರೆ. ಇದರಿಂದ ನಾನು ಸಾಕಷ್ಟು ಖಿನ್ನತೆಗೊಳಗಾಗಿದ್ದೇನೆ. ಹೀಗಾಗಿ ನನಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಎಂದು ಕೋರಿ ವಿಕೃತಕಾಮಿ ಉಮೇಶ್ ರೆಡ್ಡಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದ. 
 
ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಕೃತವಾಗಿ ಕೊಲೆ ಮಾಡುತ್ತಿದ್ದ ಉಮೇಶ್ ರೆಡ್ಡಿಗೆ ಫೆ.18, 2009 ರಲ್ಲಿ ಕರ್ನಾಟಕ ಹೈಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ ಗೊಳಿಸಿದೆ. 
 
1998 ರಲ್ಲಿ ಜಯಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಅತ್ಯಾಚಾರ ಎಸಗಿದ್ದ ಉಮೇಶ್ ರೆಡ್ಡಿ, ಬಳಿಕ ಆಕೆಯನ್ನು ಕೊಂದು ಮನೆಯಲ್ಲಿದ್ದ ಆಭರಣ ದೋಚಿಕೊಂಡು ಪರಾರಿಯಾಗಿದ್ದ. ಇನ್ನೊಂದು ಮನೆಯಲ್ಲೂ ಇದೇ ಕೃತ್ಯ ಎಸಗಲು ಯತ್ನಿಸಿದಾಗ ಆತನನ್ನು ಬಂಧಿಸಲಾಗಿತ್ತು. 
 
ಸುದೀರ್ಘ 8 ವರ್ಷಗಳ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ 2006ರ ಅಕ್ಟೋಬರ್ ತಿಂಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿಯನ್ನು ಕತ್ತೆ ಎನ್ನದೇ ಕುದುರೆ ಎನ್ನಲೇ?: ರಾಯ್ ಪ್ರಶ್ನೆ