Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಜೆಡಿಎಸ್ ಅಹೋರಾತ್ರಿ ಧರಣಿ ಅಂತ್ಯ

ಕಾವೇರಿ ವಿವಾದ: ಜೆಡಿಎಸ್ ಅಹೋರಾತ್ರಿ ಧರಣಿ ಅಂತ್ಯ
ಹಾಸನ , ಗುರುವಾರ, 15 ಸೆಪ್ಟಂಬರ್ 2016 (10:29 IST)
ಕಾವೇರಿ ನದಿ ನೀರು ಹಂಚಿಕೆ ಹಾಗೂ ರೈತರಿಗೆ ಪರಿಹಾರ ನೀಡುವ ಸಂಬಂಧ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಲಿದ್ದಾರೆ.
 
ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಕಳೆದ 9 ದಿನಗಳಿಂದ ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಧರಣಿಯನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡರು. ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. 
 
ರಾಜ್ಯದಲ್ಲಿ ನೀರಿನ ಇರುವಾಗ ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಬಸ್ ಹಾಗೂ ಲಾರಿಗಳನ್ನು ಸುಟ್ಟು ಹಾಕಿದ್ದಾರೆ. ತಾಳ್ಮೆ ಕಳೆದುಕೊಳ್ಳುವುದು ಬೇಡ. ಶಾಂತಿಯುತವಾಗಿ ಹೋರಾಟ ಮಾಡೋಣವೆಂದು ಕವಿಮಾತು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದೇಶಕ್ಕೆ ಸಮಗ್ರವಾದ ಜಲನೀತಿಯ ಅಗತ್ಯವಿದೆ: ಐವಾನ್ ಡಿಸೋಜಾ