Webdunia - Bharat's app for daily news and videos

Install App

ಕುಟುಂಬದಲ್ಲಿ ಕೋಲಾಹಲ: ಹುಟ್ಟುಹಬ್ಬ ಆಚರಿಸದೇ ಇರಲು ನಿರ್ಧರಿಸಿದ ಎಚ್ ಡಿ ದೇವೇಗೌಡ

Krishnaveni K
ಗುರುವಾರ, 16 ಮೇ 2024 (14:46 IST)
Photo Courtesy: Twitter
ಬೆಂಗಳೂರು: ಪುತ್ರ ಎಚ್‍ ಡಿ ರೇವಣ್ಣ ಬಂಧನ, ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದ ಬೇಸತ್ತಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಆಚರಿಸದೇ ಇರಲು ನಿರ್ಧರಿಸಿದ್ದಾರೆ.

ದೇವೇಗೌಡರು ಮೇ 18 ರಂದು ಜನ್ಮದಿನ ಆಚರಿಸಿಕೊಳ್ಳುತ್ತಾರೆ. ಈ ಮೇ 18 ಕ್ಕೆ ಅವರು 91 ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ಇಳಿವಯಸ್ಸಿನಲ್ಲೂ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು.

ಆದರೆ ಈಗ ಮೊಮ್ಮ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಮತ್ತು ಮಗ ಎಚ್ ಡಿ ರೇವಣ್ಣ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡು ಕುಟುಂಬದಲ್ಲಿ ದೊಡ್ಡ ಕೋಲಾಹಲವೇ ಏರ್ಪಟ್ಟಿದೆ. ಇಂತಹ ಸಂದರ್ಭದಲ್ಲಿ ಸಂಭ್ರಮ ಆಚರಿಸುವ ಮನಸ್ಸು ದೇವೇಗೌಡರ ಕುಟಂಬದಲ್ಲಿ ಇಲ್ಲ.

ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರೂ ಮನೆ ಹತ್ರ ಬರಬೇಡಿ ಎಂದು ದೇವೇಗೌಡರು ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಮೊಮ್ಮಗನ ಕೇಸ್ ಹೊರಬಿದ್ದ ಬಳಿಕ ದೇವೇಗೌಡರು ಸಾರ್ವನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಈ ಘಟನೆ ಅವರಿಗೆ ತೀವ್ರ ನೋವುಂಟುಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ