Publish Date: Tue, 24 Apr 2018 (09:58 IST)
Updated Date: Tue, 24 Apr 2018 (09:59 IST)
ಬೆಂಗಳೂರು: ಬಿಜೆಪಿ ಆಡಳಿತದಲ್ಲೇ ರಾಜ್ಯಕ್ಕೆ ಸಾಕಷ್ಟು ನಷ್ಟವಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.
‘ಬಿಜೆಪಿ ಐದು ವರ್ಷದ ಆಡಳಿತದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಂಡಿದೆ. ಇದುವೇ ಅವರ ದೊಡ್ಡ ಕೊಡುಗೆ. ಕಾಂಗ್ರೆಸ್ ತನ್ನ ಐದು ವರ್ಷದ ಆಡಳಿತಾವಧಿಯಲ್ಲಿ ಒಬ್ಬರೇ ಮುಖ್ಯಮಂತ್ರಿಯನ್ನು ನೀಡಿದರೂ ಲೋಕಾಯುಕ್ತ, ಲೋಕಸೇವಾ ಆಯೋಗದ ಕತೆ ನೋಡಿ ಏನಾಗಿದೆ ಅಂತ’ ಎಂದು ದೇವೇಗೌಡರು ಟೀಕಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ರಾಜ್ಯ ಸಾಕಷ್ಟು ಅನುಭವಿಸಿದೆ. ಆದ ಕಾರಣ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.