Publish Date: Mon, 29 Oct 2018 (09:21 IST)
Updated Date: Mon, 29 Oct 2018 (09:22 IST)
ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಇಂದು ಸಿದ್ದರಾಮಯ್ಯ ಮತ್ತು ಎಚ್ ಡಿ ದೇವೇಗೌಡರು ಜತೆಯಾಗಿ ಪ್ರಚಾರ ಮಾಡಲಿದ್ದಾರೆ.
ಒಂದು ಕಾಲದಲ್ಲಿ ಗುರು ಶಿಷ್ಯರಂತಿದ್ದ ಸಿದ್ದರಾಮಯ್ಯ-ದೇವೇಗೌಡರು ನಂತರ ಶತ್ರುಗಳಂತಿದ್ದರು. ಇದೀಗ ಮತ್ತೆ ಒಂದಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಇಬ್ಬರೂ ಜಂಟಿಯಾಗಿ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಕೂಡ್ಲಿಗಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಇಬ್ಬರೂ ನಾಯಕರು ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಪರ ಇಬ್ಬರೂ ನಾಯಕರು ಪ್ರಚಾರ ಮಾಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.