Publish Date: Tue, 13 Mar 2018 (13:39 IST)
Updated Date: Tue, 13 Mar 2018 (13:41 IST)
ಬೆಂಗಳೂರು: ಜೆಡಿಎಸ್ ವರಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಚೂರಿ ಇರಿತಕ್ಕೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಘಟನೆ ನಡೆದ 10 ನಿಮಿಷಗಳೊಳಗೆಯೇ ಆಸ್ಪತ್ರೆಗೆ ದಾಖಲಿಸಿದ ಕಾರಣ ವಿಶ್ವನಾಥ ಶೆಟ್ಟಿವರ ಜೀವ ಉಳಿಯಿತು ಎಂದಿದ್ದಾರೆ.
ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು ಯಾವ ರಾಜ್ಯದಲ್ಲೂ ನಡೆಯದೇ ಇರುವುದು ನಮ್ಮಲ್ಲಿ ನಡೆಯುತ್ತಿದೆ. ಯಾವ ರಾಜ್ಯದಲ್ಲೂ ಗೃಹ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಲ್ಲ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಹೀಗೆಲ್ಲಾ ನಡೆಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ