Publish Date: Mon, 16 Jul 2018 (10:00 IST)
Updated Date: Mon, 16 Jul 2018 (10:02 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದರ ಕುರಿತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ನಮ್ಮ ಒಪ್ಪಿಗೆಯಿದೆ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಕೂಟ ಗೆದ್ದರೆ ರಾಹುಲ್ ಗಾಂಧಿ ಪ್ರಧಾನಿಯಾಗುವುದಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಅವರು ಹೇಳಿದ್ದಾರೆ. ರಾಹುಲ್ ಪ್ರಧಾನಿ ಅಭ್ಯರ್ಥಿ ಆಗುವುದಕ್ಕೆ ತಮ್ಮ ಪಕ್ಷದ ಕಡೆಯಿಂದ ಅಭ್ಯಂತರವಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.