Select Your Language

Notifications

webdunia
webdunia
webdunia
webdunia

ದೇವೇಗೌಡರು ಆತ್ಮಹತ್ಯೆ ಮಾಡುವುದಾಗಿ ಹೇಳಿದ್ದರೇ?!

ದೇವೇಗೌಡರು ಆತ್ಮಹತ್ಯೆ ಮಾಡುವುದಾಗಿ ಹೇಳಿದ್ದರೇ?!
ಬೆಂಗಳೂರು , ಭಾನುವಾರ, 6 ಮೇ 2018 (07:10 IST)
ಬೆಂಗಳೂರು: ಪ್ರಧಾನಿ ಮೋದಿ ಕಳೆದ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಬರುವಾಗ ಜೆಡಿಎಸ್ ವರಿಷ್ಠ ದೇವೇಗೌಡ ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದರೇ? ಹಾಗಂತ ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

ತುಮಕೂರಿನಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ನಾನು  ಅಧಿಕಾರಕ್ಕೆ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕರ್ನಾಟಕಕ್ಕೆ ಪ್ರಚಾರಕ್ಕೆ ಬರುವಾಗ ದೇವೇಗೌಡರು ಹೇಳಿದ್ದರು. ಆದರೆ ನನಗೆ ಅವರ ಮೇಲೆ ಗೌರವ ಮಾತ್ರ ಇದೆ. ಅವರು ಇನ್ನೂ ನೂರು ಕಾಲ ಬಾಳಿ ಸಮಾಜಕ್ಕೆ ಸೇವೆ ಸಲ್ಲಿಸಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ಜತೆಗೆ ಚಾಟಿ ಬೀಸಲು ಅವರು ಮರೆಯಲಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ರಹಸ್ಯ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಗೆ ಮತ ಹಾಕಿ ಸುಮ್ಮನೇ ನಿಮ್ಮ ಮತ ನಷ್ಟ ಮಾಡಿಕೊಳ್ಳಬೇಡಿ ಎಂದು ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಹೇಳಿದ ಆ ‘ಮಹಾ’ ಮಾತು ಏನು ಗೊತ್ತಾ?