ಪ್ರಜ್ವಲ್, ಸೊಸೆ ಭವಾನಿ ರೇವಣ್ಣ ಮೇಲೆ ಎಚ್ ಡಿ ದೇವೇಗೌಡರು ಫುಲ್ ಗರಂ

Krishnaveni K
ಗುರುವಾರ, 16 ಮೇ 2024 (10:44 IST)
ಬೆಂಗಳೂರು: ಮಹಿಳೆಯರ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಮತ್ತು ಭವಾನಿ ರೇವಣ್ಣ ವಿರುದ್ಧ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಹಾಜರಾಗದೇ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇತ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎರಡೆರಡು ಬಾರಿ ಎಸ್ಐಟಿ ನೋಟಿಸ್ ನೀಡಿದರೂ ಭವಾನಿ ರೇವಣ್ಣ ಕೂಡಾ ಆರೋಗ್ಯದ ನೆಪ ಹೇಳಿ ತಪ್ಪಿಸಿಕೊಂಡಿದ್ದಾರೆ.

ರೇವಣ್ಣ ಜೈಲಿಗೆ ಹೋದರೂ ಪ್ರಜ್ವಲ್ ವಿದೇಶದಿಂದ ಬಂದಿಲ್ಲ. ಈ ಪ್ರಕರಣ ದೇವೇಗೌಡರು ಇಷ್ಟು ದಿನ ಕಷ್ಟಪಟ್ಟು ಗಳಿಸಿದ್ದ ಗೌರವ, ಪ್ರತಿಷ್ಠೆಯನ್ನು ಮಣ್ಣು ಪಾಲು ಮಾಡಿದೆ. ಹೀಗಾಗಿ ದೇವೇಗೌಡರು ಸೊಸೆ ಮತ್ತು ಮೊಮ್ಮಗನ ಮೇಲೆ ಗರಂ ಆಗಿದ್ದಾರೆ. ಇದೇ ಕಾರಣಕ್ಕೆ ರೇವಣ್ಣ ಮೂಲಕ ಎಚ್ಚರಿಕೆ ನೀಡಿದ್ದಾರಂತೆ.

ಭವಾನಿ ರೇವಣ್ಣ ಸದ್ಯಕ್ಕೆ ಕಾಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ರೇವಣ್ಣ ಜೈಲಿನಿಂದ ಬಿಡುಗಡೆಯಾದ ಸಂದರ್ಭದಲ್ಲೂ ಜೊತೆಗಿರಲಿಲ್ಲ. ಕಷ್ಟದ ಸಂದರ್ಭದಲ್ಲೂ ಮಗ, ಸೊಸೆ ಬಂದಿಲ್ಲ ಎನ್ನುವುದು ದೇವೇಗೌಡರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರಜ್ವ‍ಲ್ ಪ್ರಕರಣದಿಂದ ರೇವಣ್ಣ ಈಗಾಗಲೇ ಜೈಲು ವಾಸ ಅನುಭವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ