Select Your Language

Notifications

webdunia
webdunia
webdunia
webdunia

ಹೆಚ್.ಡಿ.ಕೋಟೆ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

ಹೆಚ್.ಡಿ.ಕೋಟೆ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ
ಮೈಸೂರು , ಬುಧವಾರ, 1 ನವೆಂಬರ್ 2017 (10:28 IST)
ಮೈಸೂರು: ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೆಚ್‍.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ತಡರಾತ್ರಿ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಮೂರು ದಿನದಿಂದ ಅರವಿಂದ ಆಸ್ಪತ್ರೆಯಲ್ಲಿ ಶಾಸಕ ಚಿಕ್ಕಮಾದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಶಾಸಕ ಚಿಕ್ಕಮಾದು ಪಾರ್ಥೀವ ಶರೀರವನ್ನು ಅರವಿಂದ ಆಸ್ಪತ್ರೆಯಿಂದ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಮಾಜಿ ಸಂಸದ ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೆಗೌಡ, ಸಾ.ರಾ.ಮಹೇಶ್ ಸೇರಿದಂತೆ ಹಲವು ಪ್ರಮುಖರು ಚಿಕ್ಕಮಾದು ಅಂತಿಮ ದರ್ಶನ ಪಡೆದಿದ್ದಾರೆ. ಶಾಸಕ ಚಿಕ್ಕಮಾದು ಇಬ್ಬರು ಪತ್ನಿಯರು ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಕೆ.ಆರ್.ನಗರ ತಾಲೂಕಿನ ಹೊಸೂರು ಕಲ್ಲಹಳ್ಳಿಯಲ್ಲಿ ಜನಿಸಿದ್ದ ಚಿಕ್ಕಮಾದು ಅವರು, ಹುಣಸೂರು ತಾಲೂಕಿನ ಹೊಸ ರಾಮೇನಹಳ್ಳಿಯಲ್ಲಿ ಹಲವು ವರ್ಷ ವಾಸವಿದ್ದ ಅವರು, ನಂತರ ಮೈಸೂರಿಗೆ ಶಿಫ್ಟ್ ಆಗಿದ್ದರು. 1978 ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡಿ, 1991ರಲ್ಲಿ ಹುಣಸೂರು ಕ್ಷೇತ್ರದಿಂದ ಚುನಾಯಿತರಾಗಿದ್ದರು. ಬಳಿಕ ಜೆಡಿಎಸ್ ಸೇರಿದ ಚಿಕ್ಕಮಾದು ಅವರು, 2007ರಲ್ಲಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ರು. 2013ರಲ್ಲಿ ಹೆಚ್.ಡಿ.ಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

‘ರಾಹುಲ್ ಗಾಂಧಿ ಏನು ಮಾತಾಡ್ತಿದ್ದಾರೆ ಎಂದು ಕಾಂಗ್ರೆಸ್ ನವರಿಗೇ ಅರ್ಥವಾಗುತ್ತಿಲ್ಲ’