ಎಚ್ ಡಿ ಕುಮಾರಸ್ವಾಮಿ ವಿರುದ್ಧ 50 ಕೋಟಿಗೆ ಬೇಡಿಕೆ ಆರೋಪ: ಉದ್ಯಮಿಯಿಂದ ದೂರು

Krishnaveni K
ಗುರುವಾರ, 3 ಅಕ್ಟೋಬರ್ 2024 (10:40 IST)
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ 50 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿರು ವಿಜಯ್ ಟಾಟಾ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡ ರಮೇಶ್ ಬಾಬು ವಿರುದ್ಧ ದೂರು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಉಪಚುನಾವಣೆಗೆ ನಿಲ್ಲುತ್ತಾರೆ. ಚುನಾವಣೆಗಾಗಿ 50 ಕೋಟಿ ರೂ. ನೀಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದರು. ಆದರೆ ಹಣ ಕೊಡದೇ ಇದ್ದರೆ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲು ಬಿಡಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ವಿಜಯ್ ಟಾಟಾ ದೂರಿನಲ್ಲಿ ತಿಳಿಸಿದ್ದಾರೆ.

ದೇವಸ್ಥಾನ ಕಟ್ಟಲು 5 ಕೋಟಿ ರೂ. ಕೊಡಿ ಎಂದು ರಮೇಶ್ ಬಾಬು ಕೇಳಿದ್ದರು. ಆದರೆ ನನಗೆ ಕಷ್ಟವಿದೆ ಕೊಡಲ್ಲ ಎಂದಿದ್ದೆ. ಅದಾದ ಬಳಿಕ ರಮೇಶ್ ಬಾಬು ಸಾಕಷ್ಟು ಬಾರಿ ಮೆಸೇಜ್ ಮಾಡಿದ್ದರು. 2019 ರ ಚುನಾವಣೆಯಲ್ಲೂ ಅವರಿಗಾಗಿ ಸಾಕಷ್ಟು ಖರ್ಚು ಮಾಡಿದ್ದೆವು ಎಂದು ವಿಜಯ್ ಟಾಟಾ ದೂರಿದ್ದಾರೆ.

ಇದೀಗ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಮುಗಿಬಿದ್ದಿರುವ ಕುಮಾರಸ್ವಾಮಿಗೆ ಈ ಪ್ರಕರಣ ಕೌಂಟರ್ ಆಗುವ ನಿರೀಕ್ಷೆಯಿದೆ. ಇದನ್ನೇ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳಲಿದೆ. ಈ ಬಗ್ಗೆ ಕುಮಾರಸ್ವಾಮಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments