Webdunia - Bharat's app for daily news and videos

Install App

ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಶನಿವಾರ, 10 ಜೂನ್ 2023 (18:00 IST)
ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.
 
ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.
 
ಈ ಸರ್ಕಾರದಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಅಧಿಕಾರಿಗಳ ಸಭೆ ನಡೆದಿದೆ. ಆ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ನನಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ. ನಾವು ಹೇಳಿದಂತೆ ಮಾತ್ರ ಕೇಳಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ಏನೆಂದರೆ, ನಮಗೆ ಬೇಕಾದ ಹಾಗೆ ಕೆಲಸ ಮಾಡಿ, ಇಲ್ಲವೇ ಹೊರಡಿ ಎನ್ನುವುದೇ ಈ ಫರ್ಮಾನಿನ ಒಳಾರ್ಥ ಎಂದು ಕುಮಾರಸ್ವಾಮಿ ಅವರು ದೂರಿದರು.
ಪ್ರಾರಂಭಿಕ ಹಂತದಲ್ಲಿ ಕಾಂಗ್ರೆಸ್ ಸರಕಾರ ಕೆಲವು ನಿರ್ಧಾರ ತೆಗೆದುಕೊಂಡಿದೆ. ಹಿಂದಿನ ಟೆಂಡರ್ ಗಳು ಸೇರಿದಂತೆ ಅನೇಕ ಕಡೆ ಅನುದಾನ ತಡೆ ಹಿಡಿಯಲಾಗಿದೆ. ಬಿಜೆಪಿ ಸರಕಾರ 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿತ್ತು.  ಕಳೆದ ಮೇ 6ರಂದು 675 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಿಗೆ ಎಲ್ ಒಸಿ ರಿಲೀಸ್ ಆಯಿತು. ಆ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಎಂಪಿ ಹೇಳಿದ್ದರಂತೆ, ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬೇಡಿ, ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿದ್ದರಂತೆ ಅವರು. ಅವರು ಯಾಕೆ ಹೇಳಿದ್ದರು? ಯಾರು ಆ ಎಂಪಿ ಯಾರು? ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನಿಸಿದರು.

675 ಕೋಟಿ ಮೊತ್ತದ ಎಲ್ ಒಸಿ ಹಣ ಯಾಕೆ ಬಿಡುಗಡೆ ಆಗಲಿಲ್ಲ ಎನ್ನುವುದು ಅನುಮಾನಕ್ಕೆ ಕಾರಣ. ಈಗ LOC ಬಿಡುಗಡೆ ಆಗಬೇಕು ಅಂದರೆ 5 ಪರ್ಸೆಂಟ್ ಕೊಡಲೇಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. 40 ಪರ್ಸೆಂಟ್ ಜತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರಂತೆ. ಅಲ್ಲಿಗೆ ಇದು 45 ಪರ್ಸೆಂಟ್ ಸರಕಾರ ಎಂದಾಯಿತಲ್ವೆ? ಆಗಿರುವ ಕಾಮಗಾರಿಗಳಿಗೆ ಪರ್ಸಂಟೇಜ್ ಕೇಳುತ್ತಿದ್ದಾರೆ, ಇವರು ಸತ್ಯ ಹರಿಶ್ಚಂದ್ರರು ಎಂದು ಕುಮಾರಸ್ವಾಮಿ ಕಿಡಿಕಾರಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments