ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ನಡೆಸಿರುವ ದಾಂಧಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸರಣಿ ಟ್ವಿಟ್ ಗಳನ್ನು ಮಾಡಿರುವ ಮಾಜಿ ಸಿಎಂ, ದಾಂಧಲೆ ಕೋರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಹೆಚ್.ಡಿ.ಕುಮಾಸ್ವಾಮಿ ಟ್ವಿಟ್ ಮಾಡಿದ್ದಾರೆ.