ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

Sampriya
ಶನಿವಾರ, 6 ಡಿಸೆಂಬರ್ 2025 (17:09 IST)
ಮಂಡ್ಯ:ಸಿಎಂ ಕುರ್ಚಿ ಗುದ್ದಾಟದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪರ ಶ್ರೀಗಳು ಬೆಂಬಲ ಸೂಚಿಸಿದ್ದಕ್ಕೆ, ನಾನು ಸ್ವಾಮೀಜಿ ಬೆಂಬಲ ಕೇಳಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.

 ಈ ವಿಚಾರದಲ್ಲಿ ಎಚ್‌ಡಿಕೆ ವಿರುದ್ಧ ಹಲವು ನಾಯಕರು ಅಸಮಾಧಾನ ಹೊರಹಾಕಿದರು. ಇದೀಗ ಈ ಸಂಬಂಧ ಆದಿಚುಂಚನಗಿರಿ ಸ್ವಾಮೀಜಿ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕ್ಷಮೆಯಾಚಿಸಿದ್ದಾರೆ.

ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ  ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ  ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. 

ಹಲವು ಜನರಿಗೆ ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ನಡುವಿನ ಸಂಬಂಧ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ರೆ ಸಾರ್ವಜನಿಕ ಕ್ಷಮೆಯಾಚಿಸುತ್ತೇನೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments