Publish Date: Sat, 16 Dec 2017 (09:17 IST)
Updated Date: Sat, 16 Dec 2017 (09:24 IST)
ಬೆಂಗಳೂರು: ಇಂದು 59 ನೇ ವರ್ಷದ ಜನ್ಮ ದಿನಕ್ಕೆ ಕಾಲಿಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಡಿನ ಜನತೆಯ ಸಮಸ್ಯೆಗಳ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ. ಈ ಬಾರಿ ಚುನಾವಣೆಯಲ್ಲಿ ಜನ ನಮ್ಮ ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.
ಹುಟ್ಟು ಹಬ್ಬ ಪ್ರಯುಕ್ತ ಆದಿಚುಂಚನಗಿರಿ ಮಠ ಮತ್ತು ರಾಜರಾಜೇಶ್ವರಿ ನಗರದಲ್ಲಿರುವ ರಾಜರಾಜೇಶ್ವರಿ ದೇವಾಲಯಕ್ಕೂ ಕುಮಾರಸ್ವಾಮಿ ಭೇಟಿ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ