Publish Date: Fri, 17 Nov 2017 (10:11 IST)
Updated Date: Fri, 17 Nov 2017 (10:14 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದೂ ನಾಲ್ವರು ಬಲಿಯಾಗಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 50 ಕ್ಕೇರಿದೆ.
ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ದೂರವಾಣಿ ಕರೆ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ. ವೈದ್ಯರ ಮುಷ್ಕರಿಂದ ಜನರು ಸಾಯುತ್ತಿದ್ದಾರೆ. ಹೀಗಾಗಿ ವೈದ್ಯರಿಗೆ ಮುಜುಗರ ತರುವಂತಹ ಅಂಶಗಳನ್ನು ಕೈ ಬಿಟ್ಟು, ಜನರಿಗೆ ಅನುಕೂಲವಾಗುವಂತಹ ವಿಧೇಯಕ ಮಂಡಿಸಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ