Select Your Language

Notifications

webdunia
webdunia
webdunia
webdunia

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

HD Kumaraswamy
ಬೆಂಗಳೂರು: ಅಮೆರಿಕಾಗೆ ತೆರಳುವ ಮುನ್ನ ಬಂದ ಮೇಲೆ ರಾಜ್ಯವನ್ನೇ ಅಲ್ಲೋಲ ಕಲ್ಲೋಲ ಮಾಡುವ ಸುದ್ದಿ ಕೊಡ್ತೀನಿ ಎಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಈಗ ವಾಪಸಾಗಿದ್ದಾರೆ. ಮುಂದೇನು ಎಂಬುದನ್ನು ಜನ ಕಾತುರದಿಂದ ನೋಡುತ್ತಿದ್ದಾರೆ.

ಕಳೆದ 15 ದಿನಗಳಿಂದ ಎಚ್ ಡಿ ಕುಮಾರಸ್ವಾಮಿ ಅಮೆರಿಕಾ ಪ್ರವಾಸದಲ್ಲಿದ್ದರು. ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ನಾಯಕ ಸಾ ರಾ ಮಹೇಶ್ ಕೂಡಾ ಸಾಥ್ ನೀಡಿದ್ದರು. ಇದೀಗ ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ಮರಳಿದ್ದಾರೆ.

ತಮ್ಮ ತಾಯಿ ಎರಡನೇ ತಿಂಗಳ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ನಾಳೆ ಅಥವಾ ನಾಡಿದ್ದು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಯಿದ್ದು ಇದಕ್ಕಾಗಿ ಪ್ರತ್ಯೇಕ ಪತ್ರಿಕಾಗೋಷ್ಠಿ ಕರೆಯುವ ಸಾಧ್ಯತೆಯಿದೆ.

ಕೆಪಿಎಸ್ ಸಿ ಹಗರಣ, ಬಿಡದಿ ಟೌನ್ ಶಿಪ್ ವಿಚಾರವಾಗಿ ಈ ಮೊದಲು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅದಕ್ಕೆ ಪೂರಕ ದಾಖಲೆಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ