Webdunia - Bharat's app for daily news and videos

Install App

ಸರ್ವಪಕ್ಷಗಳ ಸಭೆ ಕರೆದ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಗರಂ

Webdunia
ಬುಧವಾರ, 14 ಏಪ್ರಿಲ್ 2021 (13:44 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ  ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ.  ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಕೊವಿಡ್ ಚಿಕಿತ್ಸೆಗೆ ಮೂಲಸೌಕರ್ಯ ಹೊಂದಿಸಿಲ್ಲ. ಸೋಂಕು ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಂಡಿಲ್ಲ. ಎಲ್ಲ ಎಚ್ಚರಿಕೆ ಕಡೆಗಣಿಸಿ ಸಭೆ ನಡೆಸಿ ಏನು ಪ್ರಯೋಜನ? ಕೊರೊನಾ 2ನೇ ಅಲೆಯನ್ನ ಗಂಭೀರವಾಗಿ ಪರಿಗಣಿಸಲಿಲ್ಲ. ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ದೇಶದಲ್ಲಿ ರೆಮ್ ಡಿಸಿವಿರ್  ಇಂಜೆಕ್ಷನ್ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ. ಕೇಂದ್ರ ಇಷ್ಟಬಂದಂತೆ ರೆಮ್ ಡಿಸಿವಿರ್ ರಫ್ತು ಮಾಡಿದೆ ಎಂದು  ಟ್ವೀಟರ್ ನಲ್ಲಿ ಸರ್ಕಾರದ ವಿರಿದ್ಧ  ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಈಗ ಕಾಲ ಮಿಂಚಿದೆ, ಕೊರೊನಾ ಹೆಚ್ಚುತ್ತಿದೆ. ಆಸ್ಪತ್ರೆಗಳು ರೆಮ್ ಡಿಸಿವಿರ್ ಗೆ ಕಾಯುವಂತಾಗಿದೆ. ಕಾಳಸಂತೆಯಲ್ಲಿ  ರೆಮ್ ಡಿಸಿವಿರ್  ಮಾರಾಟವಾಗುತ್ತಿದೆ. ಕೇಂದ್ರ –ರಾಜ್ಯ ಕೊವಿಡ್ ವಿಷಯದಲ್ಲಿ ಎಡವಿದೆ ಎಂದು  ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments