ಬೆಂಗಳೂರು: ಕೇಂದ್ರದ ಹಾಲಿ ಸಚಿವ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರ ಇತ್ತೀಚೆಗಿನ ಫೋಟೋ ನೋಡಿ ಅವರು ಆರಾಮವಾಗಿದ್ದಾರಾ ಎಂಬ ಸಂಶಯ ಕೆಲವರು ವ್ಯಕ್ತಪಡಿಸಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ.
ಕಳೆದ ಕೆಲವು ದಿನಗಳಿಂದ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಬಂದಿದ್ದು ಕಡಿಮೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಲೈನ್ ಉದ್ಘಾಟನೆ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಕೂಡಾ ವೇದಿಕೆಯಲ್ಲಿದ್ದರು.
ಆದರೆ ಕುಮಾರಸ್ವಾಮಿಯವರ ಮುಖದಲ್ಲಿ ಎಂದಿನಂತೆ ಕಳೆಯಿರಲಿಲ್ಲ. ಕೊಂಚ ವೀಕ್ ಆದವರಂತೆ ಕಾಣುತ್ತಿದ್ದರು. ಹೀಗಾಗಿ ಅವರ ಫೋಟೋ ನೋಡಿ ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರು ಅವರು ಆರಾಮವಾಗಿದ್ದಾರಾ ಎಂದು ಪ್ರಶ್ನೆ ಮಾಡಿದ್ದರು.
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿಯವರನ್ನು ಭೇಟಿಯಾದ ಫೋಟೋಗಳನ್ನು ಪ್ರತಾಪ್ ಸಿಂಹ ಹಂಚಿಕೊಂಡಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು ಕುಮಾರಸ್ವಾಮಿಯವರು ಆರೋಗ್ಯವಾಗಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಉತ್ತರಿಸಿದ್ದು, ಅವರು ಆರಾಮವಾಗಿಯೇ ಇದ್ದಾರೆ ಎಂದಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.