Publish Date: Wed, 03 Jun 2026 (19:34 IST)
Updated Date: Wed, 03 Jun 2026 (19:43 IST)
ಬೆಂಗಳೂರು: ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸ್ವೀಕರಿಸುತ್ತಿದ್ದ ಹಾಗೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶುಭಕೋರಿದ್ದಾರೆ.
ಈ ಸಂಬಂಧ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.
ಕರ್ನಾಟಕದ ಅಭಿವೃದ್ಧಿ ಮತ್ತು ಜನಪರ ಕೆಲಸಗಳಿಗಾಗಿ ನಿಮಗೆ ದೊರೆತ ಈ ಅವಕಾಶವನ್ನು ನೀವು ಬಳಸಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಡಿಕೆ ಶಿವಕುಮಾರ್ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇವರಿಬ್ಬರ ನಡುವಿನ ಅಸಮಾಧಾನ ರಾಜ್ಯ ರಾಜಕಾರಣದಲ್ಲಿ ಸದ್ದು ಆಗುತ್ತಲೇ ಇರುತ್ತದೆ.
ಇದೀಗ ಇದೆಲ್ಲವನ್ನೂ ಮರೆತು ಎಚ್ ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್‌ಗೆ ವಿಶ್ ಮಾಡಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ