Publish Date: Sun, 06 May 2018 (08:21 IST)
Updated Date: Sun, 06 May 2018 (08:25 IST)
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸದ ಶಾಸಕ, ರೆಬಲ್ ಸ್ಟಾರ್ ಅಂಬರೀಷ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.
ಇಂದು ಬೆಳ್ಳಂ ಬೆಳಿಗ್ಗೆ ಗಾಲ್ಫ್ ರಸ್ತೆಯಲ್ಲಿರುವ ಅಂಬರೀಷ್ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅಂಬರೀಷ್ ಜತೆ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯದಲ್ಲಿ ಜೆಡಿಎಸ್ ಬೆಂಬಲಿಸುವಂತೆ ಕೋರಿದ್ದಾರೆ.
ಈ ವೇಳೆ ಅಂಬರೀಷ್ ಕಾಂಗ್ರೆಸ್ ತನಗೆ ಅವಮಾನ ಮಾಡಿದೆ. ನನ್ನನ್ನು ಕೇಳದೇ ಸಚಿವ ಸ್ಥಾನದಿಂದ ಕಿತ್ತು ಹಾಕಿದೆ. ಇದೇ ಕಾರಣಕ್ಕೆ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ನೋವು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.