Publish Date: Sun, 31 Mar 2024 (18:39 IST)
Updated Date: Sun, 31 Mar 2024 (18:43 IST)
ಬೆಂಗಳೂರು: ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನ ಭೇಟಿಯಾಗಿ, ಮಂಡ್ಯ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.
ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾದ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆ ಚುನಾವಣೆ ಬಗ್ಗೆ ಮಾತುಕತೆ ನಡೆಸಿದರು.
ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸುಮಲತಾ ಅವರನ್ನು ಭೇಟಿಯಾಗಿ ಮಂಡ್ಯ ಲೋಕಸಭೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಿ ಜಯ ಗಳಿಸಿದ್ದರು. ಈ ವೇಳೆ ಸುಮಲತಾ ಹಾಗೂ ಎಚ್ ಡಿ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ಜೋರಾಗಿ ನಡೆದಿತ್ತು.
ಇಂದು ಬೆಂಗಳೂರಿನಲ್ಲಿರುವ ಸುಮಲತಾರ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನ ಸ್ವಾಗತಿಸಿದರು.
ಬಳಿಕ ಸುಮಲತಾ ಅವರು ಹೆಚ್‌ಡಿಕೆ ಅವರನ್ನ ಸ್ವಾಗತಿಸಿದ್ದಾರೆ.