Webdunia - Bharat's app for daily news and videos

Install App

ಮುನಿಸು ಮರೆತು ಮಾತುಕತೆ ನಡೆಸಿದ ಕುಮಾರಸ್ವಾಮಿ- ಸುಮಲತಾ: ಬೆಂಬಲ ಕೊಡ್ತಾರಾ ಸಂಸದೆ

Sampriya
ಭಾನುವಾರ, 31 ಮಾರ್ಚ್ 2024 (18:39 IST)
Photo Courtesy X
ಬೆಂಗಳೂರು: ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು  ಮಂಡ್ಯ ಸಂಸದೆ ಸುಮಲತಾ ಅವರನ್ನ ಭೇಟಿಯಾಗಿ, ಮಂಡ್ಯ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.  

ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾದ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆ ಚುನಾವಣೆ ಬಗ್ಗೆ ಮಾತುಕತೆ ನಡೆಸಿದರು.

ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸುಮಲತಾ ಅವರನ್ನು ಭೇಟಿಯಾಗಿ ಮಂಡ್ಯ ಲೋಕಸಭೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಿ ಜಯ ಗಳಿಸಿದ್ದರು. ಈ ವೇಳೆ ಸುಮಲತಾ ಹಾಗೂ ಎಚ್‌ ಡಿ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ಜೋರಾಗಿ ನಡೆದಿತ್ತು.

ಇಂದು ಬೆಂಗಳೂರಿನಲ್ಲಿರುವ ಸುಮಲತಾರ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನ ಸ್ವಾಗತಿಸಿದರು.

ಬಳಿಕ ಸುಮಲತಾ ಅವರು ಹೆಚ್‌ಡಿಕೆ ಅವರನ್ನ ಸ್ವಾಗತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments