Publish Date: Tue, 27 Feb 2018 (09:21 IST)
Updated Date: Tue, 27 Feb 2018 (09:23 IST)
ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಸಹಕಾರ ಕೊಡುವುದಾಗಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಗೆ ಆಫರ್ ಕೊಟ್ಟಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಗೆ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಬೇಕಾದ 50 ಸದಸ್ಯರ ಬಲವಿಲ್ಲ. ಕೇವಲ 37 ಸದಸ್ಯರ ಬೆಂಬಲವಿದೆ. ಹೀಗಾಗಿ ಕಾಂಗ್ರೆಸ್ ತನ್ನ 2 ಅಭ್ಯರ್ಥಿಯನ್ನು ಗೆಲ್ಲಿಸಿ ಉಳಿದ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಕುಮಾರಸ್ವಾಮಿ ಆಹ್ವಾನ ಕೊಟ್ಟಿದ್ದಾರೆ.
ಒಂದು ವೇಳೆ ಈಗ ಜೆಡಿಎಸ್ ಗೆ ಸಹಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಜೆಡಿಎಸ್ ಸಹಕಾರ ಕಾಂಗ್ರೆಸ್ ಗೆ ಇರುತ್ತದೆ ಎಂದಿದ್ದಾರೆ. ಆ ಮೂಲಕ ಮುಂಬರುವ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಬಂದರೆ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಕೊಟ್ಟು ಸಮ್ಮಿಶ್ರ ಸರ್ಕಾರ ರಚಿಸಬಹುದು ಎಂಬ ಸುಳಿವು ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ