Publish Date: Mon, 12 Mar 2018 (13:21 IST)
Updated Date: Mon, 12 Mar 2018 (13:23 IST)
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಗಾಗಿ ದೇವೇಗೌಡರ ಕುಟುಂಬದಲ್ಲೇ ಪೈಪೋಟಿ ಎಂಬ ಟೀಕೆಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ನಮ್ಮ ಕುಟುಂಬದಿಂದ ನಾನು, ರೇವಣ್ಣ ಹೊರತಾಗಿ ಯಾರೂ ಸ್ಪರ್ಧಿಸುತ್ತಿಲ್ಲ. ಒಂದು ವೇಳೆ ನಮ್ಮ ಕುಟುಂಬದ ಬೇರೆ ಸದಸ್ಯರು ಜೆಡಿಎಸ್ ಟಿಕೆಟ್ ಗೆ ಬೇಡಿಕೆ ಇಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಅಷ್ಟೇ ಅಲ್ಲ, ಕುಟುಂಬ ರಾಜಕಾರಣ ಎಂಬ ಟೀಕೆಗೆ ತಿರುಗೇಟು ನೀಡಿದ ಅವರು, ಎಲ್ಲರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಕುಟುಂಬದವರು ಮಾಡಿದ್ರೆ ತಪ್ಪೇನು ಎಂದಿದ್ದಾರೆ. ಮಾನ್ವಿ ಪಟ್ಟಣದಲ್ಲಿ ಈ ಹೇಳಿಕೆ ನೀಡಿರುವ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ