Publish Date: Fri, 16 Mar 2018 (13:35 IST)
Updated Date: Fri, 16 Mar 2018 (13:51 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ವೀರಪ್ಪ ಮೊಯಿಲಿ ಟ್ವೀಟ್ ವಿಚಾರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಗೋಕರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ‘ಮೊಯಿಲಿ ಟ್ವೀಟ್ ಮಾಡಿರುವುದರಲ್ಲಿ ಅಚ್ಚರಿಯೇನಿಲ್ಲ. ಡಮ್ಮಿ ಗುತ್ತಿಗೆದಾರರಿಂದ ಸಾವಿರಾರು ಕೋಟಿ ರೂ. ವಸೂಲಿ ಮಾಡುವ ಸಂಗತಿ ಹಿಂದಿನಿಂದಲೇ ಇದೆ. ಇದು ಆರಂಭವಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅದನ್ನೇ ಈಗ ಕಾಂಗ್ರೆಸ್ ಮುಂದುವರಿಸಿಕೊಂಡು ಹೋಗುತ್ತಿದೆ ಅಷ್ಟೇ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ