Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಬಿಡುಗಡೆಗೊಳಿಸಿದ ವಿಡಿಯೋದಲ್ಲೇನಿದೆ (ವಿಡಿಯೋ)

HD Kumaraswamy

Krishnaveni K

ಬೆಂಗಳೂರು , ಶನಿವಾರ, 28 ಸೆಪ್ಟಂಬರ್ 2024 (14:50 IST)
ಬೆಂಗಳೂರು: ತಮ್ಮ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣವನ್ನು ಎಳೆದು ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಇಂದು ಪತ್ರಿಕಾಗೋಷ್ಠಿ ನಡೆಸಿ ಹರಿಹಾಯ್ದಿದ್ದಾರೆ. ಜೊತೆಗೆ ಸಿದ್ದರಾಮಯ್ಯ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಇಂದಿನ ಅವರ ಧೋರಣೆಯನ್ನು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮುಡಾ ಹಗರಣಕ್ಕೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರ ಬಗ್ಗೆ ಕೆಂಡ ಕಾರಿದ್ದರು. ರಾಜ್ಯಪಾಲರು ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಪಾಠ ಮಾಡಿದ್ದರು. ಇದಕ್ಕೆ ಈಗ ಕುಮಾರಸ್ವಾಮಿ ವಿಡಿಯೋ ಮೂಲಕ ತಿರುಗೇಟು ನೀಡಿದ್ದಾರೆ.

2011 ರಲ್ಲಿ ಸಿದ್ದರಾಮಯ್ಯ ರಾಜ್ಯಪಾಲರ ಅಧಿಕಾರದ ಬಗ್ಗೆ ಮಾತನಾಡಿರುವ ವಿಡಿಯೋ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾಗಿದ್ದಾಗ ಒಂದು ಧೋರಣೆ, ಆಡಳಿತದಲ್ಲಿದ್ದಾಗ ಒಂದು ಧೋರಣೆಯೇ ಎಂದು ಪ್ರಶ್ನೆ ಮಾಡಿದ್ದಾರೆ. 2011 ರಲ್ಲಿ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ ರಾಜ್ಯಪಾಲರು ಸರ್ಕಾರ ತಪ್ಪು ಮಾಡುತ್ತಿದೆ ಎನಿಸಿದಾಗ ಪ್ರಶ್ನೆ ಮಾಡುವ ಅಧಿಕಾರವಿದೆ ಎಂದಿದ್ದರು. ಈಗ ತಾವು ಅಧಿಕಾರಕ್ಕೇರಿದಾಗ ರಾಜ್ಯಪಾಲರು ಹಸ್ತಕ್ಷೇಪ ಮಾಡಬಾರದು ಎನ್ನುತ್ತಿದ್ದಾರೆ. ಇದು ಯಾವ ನ್ಯಾಯ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.


Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವದಲ್ಲಿ ನಡೆಯುವ ಭಯೋತ್ಪಾದಕ ಕೃತ್ಯಗಳಲ್ಲಿ ಪಾಕ್ ಬೆರಳಚ್ಚು: ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ