ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

Sampriya
ಶುಕ್ರವಾರ, 7 ನವೆಂಬರ್ 2025 (16:51 IST)
sಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆಯಿಂದ ನುಣುಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಇವರು ಯಾವ ಪುರುಷಾರ್ಥಕ್ಕೆ ಸರ್ಕಾರ ನಡೆಸುತ್ತಿದ್ದಾರೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರ್‌ಸ್ವಾಮಿ ಆಕ್ರೋಶ ಹೊರಹಾಕಿದರು. 

ನಗರದಲ್ಲಿ ಈ ವಿಚಾರವಾಗಿ ಪ್ರತಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಬೆಳಗಾವಿ ಜನಪ್ರತಿನಿಧಿಗಳು ಮತ್ತು ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮಣಿದಿದ್ದಾರೆ. ತಮ್ಮ ತಪ್ಪಿಗೆ ಪ್ರಧಾನಿಯವರನ್ನು ಇಕ್ಕಟ್ಟಿಗೆ ಸಿಲುಕಿಸುವ ರಾಜಕೀಯ ಯತ್ನ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಯಾವ ರಾಜ್ಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು.

ನಾನೂ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗಲೂ ಕೇಂದ್ರ ಸರ್ಕಾರದ ಕಡೆ ನೋಡದೇ ಸಮಸ್ಯೆ ಬಗೆಹರಿಸಿದ್ದೇನೆ. ಕೇಂದ್ರವು ಈಗಾಗಲೇ ಎಫ್‌ಆರ್‌ಪಿ ದರ ನಿಗದಿ ಮಾಡಿದೆ. ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ್ದರೆ ಇಂಥ ಸ್ಥಿತಿ ಬರುತ್ತಿರಲಿಲ್ಲ ಎಂದರು. 

ಕಾಂಗ್ರೆಸ್ ಸರ್ಕಾರಿ, ಗ್ಯಾರಂಟಿ ಯೋಜನೆ ಉಸ್ತುವಾರಿಗಳಿಗೆ ಸಂಪುಟ ದರ್ಜೆ ಸ್ಥಾನ ನೀಡಿ ದುಂದುವೆಚ್ಚ ಮಾಡುವ ಬದಲು ಅದನ್ನು ರೈತರಿಗೆ ನೀಡಬಹುದಿತ್ತು. ಹಣದ ಕೊರತೆ ಇದ್ದರೆ ಅದನ್ನು ಹೇಳುವುದರ ಬದಲು ಕೇಂದ್ರದ ಕಡೆ ಬೊಟ್ಟು ಮಾಡುವುದು ಸರಿಯಲ್ಲ ಎಂದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನಿನಲ್ಲಿ ಮಾನ್ಯತೆಯಿಲ್ಲದಿದ್ದರೂ ಸಲಿಂಗ ವಿವಾಹವಾದ ರಿಯಾ ನೃತ್ಯಪಟು ಯುವತಿಯರು

ಎರ್ನಾಕುಲಂ- ಬೆಂಗಳೂರು ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್‌ಸಿಗ್ನಲ್‌

ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ರಮವಾಗಿ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಮುಂದಿನ ಸುದ್ದಿ
Show comments