ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ನನಗೆ ಖುಷಿಯಾಗಿಲ್ಲ: ಎಚ್ ಡಿ ಕುಮಾರಸ್ವಾಮಿ

Krishnaveni K
ಮಂಗಳವಾರ, 14 ಮೇ 2024 (15:10 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಇಂದು ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಾರೆ. ಆದರೆ ಅವರಿಗೆ ಜಾಮೀನು ಸಿಕ್ಕಿರುವುದಕ್ಕೆ ನನಗೆ ಖುಷಿಯಾಗಿಲ್ಲ ಎಂದು ಸಹೋದರ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಅವರ ಅಭಿಮಾನಿಗಳು ಹೊಳೆನರಸೀಪುರದಲ್ಲಿ ಸಂಭ್ರಮಿಸುತ್ತಿದ್ದಾರೆ. ಕುಟುಂಬಸ್ಥರೂ ಕೊಂಚ ನಿರಾಳವಾಗಿದ್ದಾರೆ. ಆದರೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಸಂಭ್ರಮ ಬೇಡ, ನನಗೆ ಖುಷಿಯಾಗಿಲ್ಲ ಎಂದಿದ್ದಾರೆ.

‘ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ಇದು ಸಂಭ್ರಮಿಸುವ ಸಮಯವೂ ಅಲ್ಲ. ನನಗೆ ಇದರಿಂದ ಖುಷಿಯಾಗಿಲ್ಲ. ಕಾರ್ಯಕರ್ತರು ಸಂಭ್ರಮಿಸುವ ಕ್ಷಣವಲ್ಲ. ಇಡೀ ರಾಜ್ಯವೇ ತಲೆ ತಗ್ಗಿಸುವ ಘಟನೆ’ ಎಂದು ಅಚ್ಚರಿ ಮೂಡಿಸಿದ್ದಾರೆ.

ಪೆನ್ ಡ್ರೈವ್ ಕೊಟ್ಟವರು ಯಾರು ಎಂದು ಎಸ್ಐಟಿ ತನಿಖೆ ಮಾಡುತ್ತಿಲ್ಲ. ಎಸ್ಐಟಿ ತನಿಖೆ ಶಾಸಕರಿಗೆ ಸರಬರಾಜಾಗುತ್ತಿದೆ. ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಲ ಇದೆ. ಅದು ಯಾರೆಂದು ಎಲ್ಲರಿಗೂ ಗೊತ್ತಿದೆ. ಏಪ್ರಿಲ್ 22 ರಂದು ದಾಖಲಾದ ಎಫ್ಐಆರ್ ಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಪೆನ್ ಡ್ರೈವ್ ಹಗರಣ ದೊಡ್ಡ ಮಟ್ಟದಲ್ಲಿ ನಡೆದಿದೆ. ರೇವಣ್ಣ ಕುಟುಂಬ ಮುಗಿಸಲು ನಾನು ಪ್ಲ್ಯಾನ್ ಮಾಡಿಲ್ಲ. ಎಲ್ಲವೂ ತನಿಖೆಯಿಂದ ಗೊತ್ತಾಗಲಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments