Publish Date: Sat, 28 Apr 2018 (11:45 IST)
Updated Date: Sat, 28 Apr 2018 (11:47 IST)
ಬೆಂಗಳೂರು: ಜೆಡಿಎಸ್ ನಾಯಕರು ಅಮಿತ್ ಶಾ ಭೇಟಿಯಾಗಿದ್ದಾರೆಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು ನಾನ್ಯಾಕೆ ಅಮಿತ್ ಶಾ ಅವರನ್ನು ಭೇಟಿಯಾಗಲಿ? ಕಾಂಗ್ರೆಸ್, ಬಿಜೆಪಿ ಇಬ್ಬರೂ ಲೂಟಿಕೋರರು ಎಂದಿದ್ದಾರೆ.
ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಿಸಿದವರು ಯಾರು? ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಜತೆ ಸಂಬಂಧವಿದೆ. ಅವರಿಂದಾಗಿಯೇ ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದೆ ಎಂದು ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.