Publish Date: Thu, 18 Jul 2019 (19:17 IST)
Updated Date: Thu, 18 Jul 2019 (19:19 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸ್ಪೀಕರ್ ರಮೇಶ್ ಕುಮಾರ್ ಅವರು ಸೇರಿಕೊಂಡು ನಾಟಕ ಮಾಡುತ್ತಿದ್ದಾರೆ.
ಹೀಗಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡೋದಾಗಿ ಹೇಳಿದ್ರು. ಆದರೆ ಅದನ್ನು ಮಾಡದೇ ಸದನದ ದಿಕ್ಕು ತಪ್ಪುವಂತೆ ಮಾಡಿದ್ದಾರೆ ಎಂದು ದೂರಿದ್ರು.
ಪ್ರಮಾಣಿಕವಾಗಿ ಕೆಲಸ ಮಾಡಿ ಸ್ಪೀಕರ್ ಇಂದೇ ವಿಶ್ವಾಸಮತ ಸಾಬೀತುಪಡಿಸಲು ಆದೇಶ ನೀಡಬೇಕು ಎಂದು ಒತ್ತಾಯಿಸಿದ್ರು.
ಸಂವಿಧಾನ ಬದ್ಧವಾಗಿ ಸ್ಪೀಕರ್ ನಡೆದುಕೊಳ್ಳಬೇಕು. ಆದರೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡದೇ, ಇನ್ನೊಂದೆಡೆ ವಿಶ್ವಾಸ ಮತ ಯಾಚನೆಗೆ ಅವಕಾಶ ನೀಡದೇ ಕಾಲಹರಣ ಮಾಡ್ತಿದ್ದಾರೆ ಎಂದು ಟೀಕೆ ಮಾಡಿದ್ರು.