Select Your Language

Notifications

webdunia
webdunia
webdunia
webdunia

ಇಂದು ಬಿಜೆಪಿ ಪರ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಚಾರ

HD Kumaraswamy
ಬೆಂಗಳೂರು: ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಇಂದು ಬಿಜೆಪಿ ಪರ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ.

ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇದಕ್ಕಾಗಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿಗಳ ಪರ ಮಿತ್ರ ಪಕ್ಷ ಜೆಡಿಎಸ್ ನಾಯಕರು ಬಂದಿರಲಿಲ್ಲ. ಕುಮಾರಸ್ವಾಮಿ ಪ್ರಚಾರಕ್ಕೆ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದರು.

ಅದರಂತೆ ಇಂದು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಎಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಕುಮಾರಸ್ವಾಮಿ ಜೊತೆಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರೂ ಇಂದು ಪ್ರಚಾರಕ್ಕೆ ಸಾಥ್ ನೀಡಲಿದ್ದಾರೆ.

ಕುಮಾರಸ್ವಾಮಿ ಜೊತೆಗೆ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ, ಛಲವಾದಿ ನಾರಾಯಣಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ, ಜಿಎಂ ಸಿದ್ದೇಶ್ವರ್, ಮುರುಗೇಶ್ ನೀರಾಣಿ, ಹರತಾಳು ಹಾಲಪ್ಪ, ಎಂಪಿ ರೇಣುಕಾಚಾರ್ಯ ಮೊದಲಾ ಬಿಜೆಪಿ ನಾಯಕರು ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರೈಲಿನಡಿಗೆ ಬಿದ್ದು ಪ್ರಾಣ ಹೋಗಬೇಕಾಗಿದ್ದ ವ್ಯಕ್ತಿಯನ್ನು ಕೂದಳೆಯಲ್ಲಿ ಕಾಪಾಡಿದ್ದು ಯಾರು ನೋಡಿ video