Publish Date: Wed, 04 Apr 2018 (07:43 IST)
Updated Date: Wed, 04 Apr 2018 (07:47 IST)
ರಾಮನಗರ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಕ್ಷೇತ್ರದಿಂದ ಸ್ಪರ್ದಿಸಲು ತೀರ್ಮಾನಿಸಿರುವುದಾಗಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ.
ರಾಮನಗರದಲ್ಲಿ ನಡೆದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು,’ರಾಮನಗರ, ಚನ್ನಪಟ್ಟಣ ಎರಡು ಕಣ್ಣಿದ್ದಂತೆ. ನಿಮ್ಮೆಲ್ಲರ ಒತ್ತಡಕ್ಕೆ ತಲೆ ಬಾಗಿ ರಾಮನಗರ, ಚನ್ನಪಟ್ಟಣ ಎರಡೂ ಕಡೆ ಎಚ್‍ಡಿ ಕುಮಾರಸ್ವಾಮಿಯವರು ಸ್ಪರ್ಧಿಸುವ ನಿರ್ಣಯ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕುಮಾರಸ್ವಾಮಿಯವರು ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ