Publish Date: Fri, 11 Aug 2017 (10:06 IST)
Updated Date: Fri, 11 Aug 2017 (10:07 IST)
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಚಿಕಿತ್ಸೆಗಾಗಿ ಸಿಂಗಾಪುರ್ ಗೆ ಕುಟುಂಬ ಸಮೇತ ತೆರಳಲಿದ್ದಾರೆ.
ಕಫ ಮತ್ತು ಕೆಮ್ಮಿನಿಂದ ಬಳಲುತ್ತಿರುವ ಎಚ್ ಡಿಕೆ ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯಲ್ಲಿದ್ದರು. ಇದೀಗ ಸಮಸ್ಯೆ ಸರಿಹೋಗದ ಕಾರಣ ಸಿಂಗಾಪುರ್ ನ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ತೆರಳಲಿದ್ದಾರೆ.
ಕೆಲವು ದಿನಗಳ ಕಾಲ ಅಲ್ಲಿ ಚಿಕಿತ್ಸೆ ಪಡೆದು ಕುಮಾರಸ್ವಾಮಿ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳಲಿದ್ದಾರೆ. ಎಚ್ ಡಿಕೆಗೆ ಪತ್ನಿ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ