Publish Date: Mon, 14 Nov 2022 (17:50 IST)
Updated Date: Mon, 14 Nov 2022 (17:55 IST)
ಮಂಡ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ನಿವೃತ್ತ ಯೋಧನ್ನ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ.ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು.ತಮ್ಮ ತಂದೆಯವರ ಜೊತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ.ಗುಂಡಿಯಿಂದ ಜೀವ ಕಳೆದುಕೊಂಡಿದ್ದು,ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿ ಎಂದು ಸರ್ಕಾರ ವಿರುದ್ದ ಹೆಚ್ ಡಿ ಕೆ ಆಕ್ರೋಶ ಹೊರಹಾಕಿದ್ದಾರೆ.