ಇಂದು ಮಂಡ್ಯಕ್ಕೆ ಎಚ್ ಡಿ ಕುಮಾರಸ್ವಾಮಿ, ನೂತನ ಸಂಸದರ ಕಚೇರಿ ಉದ್ಘಾಟನೆ

Krishnaveni K
ಶನಿವಾರ, 15 ಜೂನ್ 2024 (10:47 IST)
ಮಂಡ್ಯ: ನೂತನ ಸಂಸದರಾಗಿ ಆಯ್ಕೆಯಾದ ಬಳಿಕ ಎಚ್ ಡಿ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಅವರು ಇಂದು ಜನರಿಂದ ಅಭಿನಂದನೆ ಸ್ವೀಕರಿಸಲಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಕುಮಾರಸ್ವಾಮಿ ಭರ್ಜರಿ ಅಂತರದಿಂದ ಜಯಗಳಿಸಿದ್ದರು. ಬಳಿಕ ಇದೀಗ ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ರಚನೆಯಾಗಿರುವ ಎನ್ ಡಿಎ ಸರ್ಕಾರದಲ್ಲಿ ಕುಮಾರಸ್ವಾಮಿ ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಅವರು ನಿನ್ನೆ ರಾಜ್ಯಕ್ಕೆ ಬಂದಿದ್ದರು. ನಿನ್ನೆ ಬೆಂಗಳೂರಿಗೆ ಬಂದಿದ್ದ ಕುಮಾರಸ್ವಾಮಿ ಇಂದು ತಮ್ಮ ಸ್ವಕ್ಷೇತ್ರ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ಇಂದು ನೂತನ ಸಂಸದರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ.

ಬಳಿಕ ಜನರೊಂದಿಗೆ ಬೆರೆತು ಅಭಿನಂದನೆ ಸ್ವೀಕರಿಸಲಿದ್ದಾರೆ. ಮಂಡ್ಯದ ಜನ ಈ ಬಾರಿ ಕುಮಾರಸ್ವಾಮಿಗೆ ಭಾರೀ ಅಂತರದ ಗೆಲುವು ನೀಡಿದ್ದರು. ಜೊತೆಗೆ ಕೇಂದ್ರ ಸಚಿವರಾಗಿ ಮಂಡ್ಯಕ್ಕೆ ಆಗಮಿಸುತ್ತಿರುವ ಕಾರಣಕ್ಕೆ ಕುಮಾರಸ್ವಾಮಿಯವರ ಈ ಭೇಟಿ ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಬಸ್‌ನಲ್ಲಿ ಯುವತಿಗೆ ಮೈಮುಟ್ಟಿ ಲೈಂಗಿಕ ದೌರ್ಜನ್ಯ, ಧರ್ಮದೇಟು ಕೊಟ್ಟ ಪ್ರಯಾಣಿಕರು

ಮುಂದಿನ ಸುದ್ದಿ
Show comments