Publish Date: Thu, 21 Mar 2024 (11:30 IST)
Updated Date: Thu, 21 Mar 2024 (11:37 IST)
ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮಾರ್ಚ್ 24ರವರೆಗೂ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಮಾರ್ಚ್ 25ರಂದು ಎಚ್‌ಡಿಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇನ್ನೂ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ. ನಾಮಪತ್ರ ಸಲ್ಲಿಕೆಗೆ ಮಾತ್ರ ಕ್ಷೇತ್ರಕ್ಕೆ ಬನ್ನಿ. ನಿಮ್ಮನ್ನು ನಾವು ಗೆಲ್ಲಿಸುತ್ತೇವೆ ಎಂದು ಅವರ ಕಾರ್ಯಕರ್ತರು ಹೇಳುತ್ತಿದ್ದಾರೆ.
ಇನ್ನೂ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವು ಜೋರಾಗಿದ್ದು, ಜೆಡಿಎಸ್- ಬಿಜೆಪಿ ಮೈತ್ರಿ ಕಸರತ್ತು ನಡೆಸುತ್ತಿದ್ದೆ. ಮಂಡ್ಯ, ಕೋಲಾರ ಮತ್ತು ಹಾಸನ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದು, ಈ ಕ್ಷೇತ್ರಕ್ಕೆ ಇನ್ನು ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮಂಡ್ಯದ ಅಭ್ಯರ್ಥಿಯಾಗಬೇಕೆಂಬ ಒತ್ತಡ ಜೋರಾಗಿದ್ದು, ಅವರ ನಿರ್ಧಾರ ಇನ್ನಷ್ಟೇ ಬರಬೇಕಿದೆ.