Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ರಾಜ್ಯಕ್ಕೆ: ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

HD Kumarswamy

Krishnaveni K

ಬೆಂಗಳೂರು , ಶುಕ್ರವಾರ, 14 ಜೂನ್ 2024 (10:11 IST)
Photo Credit: Facebook
ಬೆಂಗಳೂರು: ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸುತ್ತಿದ್ದು ಭರ್ಜರಿ ಸ್ವಾಗತಕ್ಕೆ ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

ಮೊನ್ನೆಯಷ್ಟೇ ಜಾರಿಗೆ ಬಂದ ನೂತನ ಎನ್ ಡಿಎ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ದೆಹಲಿಯಲ್ಲಿ ತಮ್ಮ ಕಚೇರಿಯಲ್ಲಿ ಕುಟುಂಬ ಸಮೇತರಾಗಿ ಪೂಜೆ ನಡೆಸಿ ಅಧಿಕಾರ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದರು.

ಕೇಂದ್ರ ಸಚಿವರಾದ ಬಳಿಕ ಇಂದು ಮೊದಲ ಬಾರಿಗೆ ಕುಮಾರಣ್ಣ ಅಗಮಿಸುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿದೆ. ಜೆಡಿಎಸ್ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ. ಜೂನ್ 16 ರಂದು ಅಭಿನಂದನಾ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ.

ಚನ್ನಪಟ್ಟಣದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದ್ದು, ಈ ವೇಳೆ ತಮಗೆ ಮತ ನೀಡಿದ ಮತದಾರರಿಗೆ ಎಚ್ ಡಿಕೆ ಧನ್ಯವಾದ ಸಲ್ಲಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೇಣುಕಾಸ್ವಾಮಿ ಪ್ರಕರಣ ದಾಖಲಾಗಿ 24 ಗಂಟೆಗಳ ಬಳಿಕ ತಿಳಿಯಿತು: ಡಿಕೆ ಶಿವಕುಮಾರ್