ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ರಾಜ್ಯಕ್ಕೆ: ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

Krishnaveni K
ಶುಕ್ರವಾರ, 14 ಜೂನ್ 2024 (10:11 IST)
Photo Credit: Facebook
ಬೆಂಗಳೂರು: ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸುತ್ತಿದ್ದು ಭರ್ಜರಿ ಸ್ವಾಗತಕ್ಕೆ ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

ಮೊನ್ನೆಯಷ್ಟೇ ಜಾರಿಗೆ ಬಂದ ನೂತನ ಎನ್ ಡಿಎ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ದೆಹಲಿಯಲ್ಲಿ ತಮ್ಮ ಕಚೇರಿಯಲ್ಲಿ ಕುಟುಂಬ ಸಮೇತರಾಗಿ ಪೂಜೆ ನಡೆಸಿ ಅಧಿಕಾರ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದರು.

ಕೇಂದ್ರ ಸಚಿವರಾದ ಬಳಿಕ ಇಂದು ಮೊದಲ ಬಾರಿಗೆ ಕುಮಾರಣ್ಣ ಅಗಮಿಸುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿದೆ. ಜೆಡಿಎಸ್ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ. ಜೂನ್ 16 ರಂದು ಅಭಿನಂದನಾ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ.

ಚನ್ನಪಟ್ಟಣದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದ್ದು, ಈ ವೇಳೆ ತಮಗೆ ಮತ ನೀಡಿದ ಮತದಾರರಿಗೆ ಎಚ್ ಡಿಕೆ ಧನ್ಯವಾದ ಸಲ್ಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಮುಂದಿನ ಸುದ್ದಿ
Show comments