Publish Date: Sun, 24 Dec 2017 (14:33 IST)
Updated Date: Sun, 24 Dec 2017 (15:41 IST)
ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರು ಮತ್ತೆ ಮದುವೆ ಮಾಡಿಕೊಂಡಿದ್ದಾರೆ. ಇದಕ್ಕೆ ರೇವಣ್ಣ ಅವರ ತಂದೆಯಾಗಿರುವ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ತಾಯಿ ಚನ್ನಮ್ಮ ಸಾಕ್ಷಿಯಾಗಿದ್ದಾರೆ.
ಮದುವೆ ಎಂದ ತಕ್ಷಣ ಮತ್ತೊಂದು ಮದುವೆಯಾಗಿದ್ದಾರೆ ಎಂದು ತಿಳಿದುಕೊಳ್ಳಬೇಡಿ. 60ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ರೇವಣ್ಣ ಅವರು ಷಷ್ಠಿಪೂರ್ತಿ ಕಾರ್ಯಕ್ರಮವನ್ನು ಆಚರಣೆ ಮಾಡಿಕೊಂಡಿದ್ದು, ಆದ್ದರಿಂದ ಮತ್ತೊಮ್ಮೆ ಭವಾನಿ ರೇವಣ್ಣನವರಿಗೆ ತಾಳಿ ಕಟ್ಟುವುದರ ಮೂಲಕ ಸಂಭ್ರಮ ಹಂಚಿಕೊಂಡರು.
ಆದಿಚುಂಚನಗಿರಿಮಠದ ನಿರ್ಮಲಾನಂದ ಸ್ವಾಮೀಜಿ ಆಶೀರ್ವಚನ ಮಾಡಿದ್ದಾರೆ. ಮಕ್ಕಳಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ, ಸೂರಜ್ ಅವರ ಭಾವಿ ಪತ್ನಿ ಸಾಕ್ಷಿಯಾದ್ರು. ಇವರಷ್ಟೇ ಅಲ್ಲದೇ ಕುಟುಂಬ ಸದಸ್ಯರು, ಅಪಾರ ಅಭಿಮಾನಿಗಳು ಹಾಗೂ ಹಿತೈಷಿಗಳು ಆಗಮಿಸಿ ಶುಭಕೋರಿದ್ರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.