ಬೆಂಗಳೂರು : ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು 100 ಕಿ.ಮೀ ರೋಡ್ ಶೋ ನಡೆಸಲು ಜೆಡಿಎಸ್ ಮುಂದಾಗಿದೆ.
 
ಈ ತಿಂಗಳ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
 
 			
 
 			
			                     
							
							
			        							
								
																	ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ  ಅವರು, ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ ಎಂದರು. 
									
										
								
																	ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು.