Select Your Language

Notifications

webdunia
webdunia
webdunia
webdunia

ಇಡಗುಂಜಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್‍ಡಿಡಿ

ಇಡಗುಂಜಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್‍ಡಿಡಿ
ಉತ್ತರ ಕನ್ನಡ , ಸೋಮವಾರ, 25 ಜೂನ್ 2018 (18:41 IST)
ಕಾರವಾರ: ಇಡಗುಂಜಿಯ ಪ್ರಸಿದ್ಧ ವಿನಾಯಕ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಭೇಟಿ ನೀಡಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿರುವ ವಿನಾಯಕ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ ಕುಟುಂಬದ ಪರ ಪೂಜೆ ಸಲ್ಲಿಸಿದರು. ಇದೇ ವೇಳೆ ಹಣ ಹೋಮವನ್ನೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೆರವೇರಿಸಿದರು. ಕಳೆದ ಮೂವತ್ತು ವರ್ಷಗಳಿಂದಲೂ ಇಡಗುಂಜಿ ವಿನಾಯಕ ದೇವರಿಗೆ ಮಾಜಿ ಪ್ರಧಾನಿ ಭಕ್ತಿಯಿಂದ ನಡೆದುಕೊಳ್ಳುತ್ತಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತೆ ಅಧಿಕಾರ ಸ್ವೀಕಾರ