Publish Date: Fri, 23 Nov 2018 (13:43 IST)
Updated Date: Fri, 23 Nov 2018 (13:44 IST)
2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೂ, ಕಡಿಮೆ ಸ್ಥಾನ ಪಡೆದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಸಿಎಂ ಆಗಿದ್ದು ಇತಿಹಾಸವಾಗಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯದಿಂದ ರಾಜ್ಯದ ಸಿಎಂ ಆಗಿದ್ದು ಭಾರತದ ಇತಿಹಾಸದಲ್ಲಿ ಇದು ಮೊದಲು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಹೇಳಿದ್ದಾರೆ. ಅವರು ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಬೂದನೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಸಿ ನಂತರ ಮಾತನಾಡಿದರು.
ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಆದ್ರೆ, ವಿರೋಧ ಪಕ್ಷದವರು ಯಾವುದೇ ತಪ್ಪು ಮಾಡದಿದ್ದರು ಸರಕಾರದ ವಿರುದ್ಧ ಆರೋಪ ಮಾಡಿ ಮಾತನಾಡುತ್ತಿದ್ದಾರೆ. ವಿಪಕ್ಷದವರಿಗೆ ಮಾಡಲು ಕೆಲಸವಿಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆ ಎಂದು ಶಾಸಕ ನಾಗನಗೌಡ ಕಂದಕೂರ ವಾಗ್ದಾಳಿ ನಡೆಸಿದ್ದಾರೆ.