Select Your Language

Notifications

webdunia
webdunia
webdunia
webdunia

ರವಿ ಹಲ್ಲೆ ಯತ್ನಕ್ಕೆ ಎಚ್‌ಡಿಕೆ ಖಂಡನೆ: ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸಲ್ಲ ಎಂದ ಕೇಂದ್ರ ಸಚಿವ

ರವಿ ಹಲ್ಲೆ ಯತ್ನಕ್ಕೆ ಎಚ್‌ಡಿಕೆ ಖಂಡನೆ: ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸಲ್ಲ ಎಂದ ಕೇಂದ್ರ ಸಚಿವ

Sampriya

ನವದೆಹಲಿ , ಶುಕ್ರವಾರ, 20 ಡಿಸೆಂಬರ್ 2024 (14:12 IST)
ನವದೆಹಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ಮೇಲೆ ಬೆಳಗಾವಿಯ ಸುವರ್ಣಸೌಧದಲ್ಲಿಯೇ ನಡೆದಿರುವ ಹಲ್ಲೆ ಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.

ಸಚಿವೆ ಬಗ್ಗೆ ಸಿ.ಟಿ.ರವಿ  ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕುಮಾರಸ್ವಾಮಿ  ಮಾಧ್ಯಮ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಆಗ್ರಹಿಸಿದರು.

ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾವು ನ್ಯಾಯ‌ಸಮರ್ಥವಾಗಿ ಮಾತನಾಡುತ್ತಿದ್ದೇವೆ. ನಾವೇನೂ ತನಿಖೆ ಬೇಡ ಎಂದು ಹೇಳಿಲ್ಲವಲ್ಲ. ಸತ್ಯಶೋಧನೆ ಆಗದೇ ತನಿಖೆಯಾಗದೇ ಯಾವುದೇ ಅಂತಿಮನಿರ್ಧಾರಕ್ಕೆ ಬರುವುದು ತಪ್ಪು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿಟಿ ರವಿಗೆ ಕೊಲೆಗಡುಕ ಅಂದಿದ್ದು ನಿಜ ಎಂದು ಒಪ್ಪಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್