Webdunia - Bharat's app for daily news and videos

Install App

ಮುಲಾಯಂ ಸಾವಿಗೆ ಸಿದ್ದು, HDK ಸಂತಾಪ

Webdunia
ಸೋಮವಾರ, 10 ಅಕ್ಟೋಬರ್ 2022 (20:49 IST)
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರಿಳೆದಿದ್ದಾರೆ. ಇವರ ಸಾವಿಗೆ ಕರ್ನಾಟಕ ಸೇರಿದಂತೆ ಎಲ್ಲೆಡೆ ಸಂತಾಪ ಸೂಚಿಸಲಾಗ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​​​ ಮಾಡಿ ಮುಲಾಯಂ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್ ಯಾದವ್ ಸಾವು ಆಘಾತಕಾರಿ. ಮುಲಾಯಂಸಿಂಗ್ ಉತ್ತರಪ್ರದೇಶದಲ್ಲಿ ಕೋಮುವಾದದ ವಿರುದ್ಧದ ಪ್ರಬಲ ರಾಜಕೀಯ ಶಕ್ತಿಯಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವೀಟ್​​ನಲ್ಲಿ ತಿಳಿಸಿದ್ದಾರೆ. ಮಾಜಿ ಸಿಎಂ H.D.ಕುಮಾರಸ್ವಾಮಿ ಟ್ವೀಟ್​​ ಮಾಡಿ, ಮುಲಾಯಂ ಜಿ ಅವರು ರಾಜಕೀಯದಲ್ಲಿ ತಮ್ಮ ಸುದೀರ್ಘ ಅವಧಿಯಲ್ಲಿ ಹಲವಾರು ಇತರ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದರು ಮತ್ತು ದೇಶಕ್ಕಾಗಿ ದಣಿವರಿಯದೆ ಕೆಲಸ ಮಾಡಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ನಷ್ಟವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments