Publish Date: Tue, 02 Aug 2022 (19:40 IST)
Updated Date: Tue, 02 Aug 2022 (19:43 IST)
ತುಮಕೂರಿನ ಕುಣಿಗಲ್ ತಾಲೂಕು ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. KA 02 G 1162 ಸಂಖ್ಯೆಯ ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ..ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹಾಗೂ ಬೆಳ್ಳಾರೆ ಗ್ರಾಮಗಳಿಗೆ ಭೇಟಿ ನೀಡಿ ಫಾಜಿಲ್ ಮತ್ತು ಪ್ರವೀಣ್ ನೆಟ್ಟಾರ್ ಕುಟುಂಬ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ..ಅಪಘಾತದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ..ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ..ಈ ಕುರಿತು ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.