Select Your Language

Notifications

webdunia
webdunia
webdunia
webdunia

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು HDK ಇಂಗಿತ

ಕುಮಾರಸ್ವಾಮಿ
ಮಂಡ್ಯ-ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೆಲುವಿಗೆ ರಣತಂತ್ರದ ಜತೆಗೆ ಸಾಧಕ-ಬಾಧಕಗಳ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಹೆಚ್ಡಿಕೆ ತಮ್ಮ ಪಕ್ಷದ ನಾಯಕರುಗಳ ಜೊತೆ ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆನ್ನಲಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಪುತ್ರ ನಿಖೀಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿಯೂ ಸೋತಿದ್ದರ ಬಗ್ಗೆ ಚರ್ಚೆ ನಡೆದಿದ್ದು, ಮತ್ತೆ ಅದು ಮರುಕಳಿಸದಂತೆ ಎಚ್ಚರ ವಹಿಸಲು ಹೆಚ್ಡಿಕೆ ತಂತ್ರಗಾರಿಕೆ ಮಾಡುತ್ತಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ 8 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಕುಮಾರಸ್ವಾಮಿ ಸ್ಪರ್ಧಿಸಿದರೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯುವ ಬಗ್ಗೆ ಒಮ್ಮತ ವ್ಯಕ್ತವಾಗಿದೆ. ಒಂದು ವೇಳೆ ಸಂಸದೆ ಸುಮಲತಾ ಕಾಂಗ್ರೆಸ್‌ನಿಂದ ಅಥವಾ ಪಕ್ಷೇತರವಾಗಿ ಸ್ಪರ್ಧೆಗಿಳಿದರೆ ಯಾವ ರೀತಿ ಚುನಾವಣೆ ಮಾಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನುಮಾನಾಸ್ಪದ ರೀತಿಯಲ್ಲಿ ಮಗುವಿನ ಶವ ಪತ್ತೆ