Select Your Language

Notifications

webdunia
webdunia
webdunia
webdunia

ಕರಾವಳಿ ತೀರದ ಹಿಂಸಾಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕೈವಾಡ: ಕುಮಾರಸ್ವಾಮಿ

ಕರಾವಳಿ ತೀರದ ಹಿಂಸಾಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕೈವಾಡ: ಕುಮಾರಸ್ವಾಮಿ
ಬೆಳಗಾವಿ , ಭಾನುವಾರ, 7 ಜನವರಿ 2018 (13:48 IST)
ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಹಿಂದೆ ಕಾಂಗ್ರೆಸ್, ಬಿಜೆಪಿ ಕೈವಾಡವಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಕ್ರೂಢಿಕರಿಸುವ ಯತ್ನ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ತೀರದಲ್ಲಿ ನಡೆಯುತ್ತಿರುವ ಹಿಂದು ಮುಸ್ಲಿಮರ ಹತ್ಯೆಗಳನ್ನು ಎರಡು ರಾಷ್ಟ್ರೀಯ ಪಕ್ಷಗಳು ರಾಜಕಾರಣಗೊಳಿಸುತ್ತಿವೆ. ವಿಚ್ಚಿದ್ರಕಾರಿ ಶಕ್ತಿಗಳಿಗೆ ಉತ್ತೇಜನ ನೀಡುತ್ತಿವೆ ಎಂದು ಕಿಡಿಕಾರಿದರು.
 
ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಿವಾಸಿ ಪರೇಶ್ ಮೆಸ್ತಾ ಮತ್ತು ಮಂಗಳೂರಿನ ದೀಪಕ್ ರಾವ್ ಪೋಷಕರು ತಮ್ಮ ಪುತ್ರ ಬಿಜೆಪಿ ಅಥವಾ ಯಾವುದೇ ಬಿಜೆಪಿ ಪರ ಸಂಘಟನೆಗೆ ಸೇರಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ಎಂದು ಹೇಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ವಾಗ್ದಾಳಿ ನಡೆಸಿದರು.
 
ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗಡೆ ಮತ್ತು ಮೈಸೂರು-ಕೊಡಗು ಸಂಸದರಾದ ಪ್ರತಾಪ್ ಸಿಂಹ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇಂತಹ ನಾಯಕರ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕಾಗಿದೆ. ಆದರೆ. ಸರಕಾರ ರಾಜಕಾರಣಕ್ಕಾಗಿ ಹೊಂದಾಣಿಕೆಯ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇದೀಗ, ರಾಹುಲ್, ಸಿದ್ದರಾಮಯ್ಯರಿಗೆ ಹಿಂದುತ್ವ ನೆನಪಾಗಿದೆ: ಸಿಎಂ ಯೋಗಿ ಲೇವಡಿ