Daily Horoscope

ಕುತೂಹಲ ಕೆರಳಿಸಿದ ಎಚ್‌ಡಿಕೆ ಸೋಮಣ್ಣ ಭೇಟಿ

geetha
ಗುರುವಾರ, 1 ಫೆಬ್ರವರಿ 2024 (14:00 IST)
ಬೆಂಗಳೂರು : ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದ ಸೋಮಣ್ಣ ಅವರ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸೋಮಣ್ಣ ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದು ಖಚಿತ ಎನ್ನಲಾಗಿತ್ತಷ್ಟೇ ಅಲ್ಲದೇ ಹಲವು ಬಾರಿ ಕಾಂಗ್ರೆಸ್‌ ಮುಖಂಡರೊಡನೆ ಸೋಮಣ್ಣ ವೇದಿಕೆ ಹಂಚಿಕೊಂಡಿದ್ದರು. ಜೊತೆಗೆ ಕಾಂಗ್ರೆಸ್‌ ಸೇರ್ಪಡೆಯ ಸುಳಿವೂ ಸಹ ನೀಡಿದ್ದರು. ಆದರೆ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಎಚ್‌ಡಿಕೆ ಅವರನ್ನು ಭೇಟಿಯಾದ ಸೋಮಣ್ಣ ಇದೊಂದು ಸೌಹಾರ್ದಯುತ ಭೇಟಿ ಎಂದಿದ್ದಾರೆ. 

ಪಂಚರಾಜ್ಯ ಚುನಾವಣೆಯ ಫಲಿತಾಂಶ, ಅಯೋಧ್ಯೆ ರಾಮಮಂದಿರದ ಹವಾ ಹಾಗೂ ಜಗದೀಶ್‌ ಶೆಟ್ಟರ್‌ ಘರ್‌ ವಾಪ್ಸಿ ಸೋಮಣ್ಣ ಅವರನ್ನು ಪಕ್ಷ ಬಿಡಲು ಹಿಂಜರಿಯುವಂತೆ ಮಾಡಿದೆ ಎನ್ನಲಾಗಿದ್ದು, ಸಧ್ಯಕ್ಕೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಪಡೆಯಲು ಪ್ರಯತ್ನಿಸುತ್ತಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ಮತ್ತು ಸೋಮಣ್ಣ ಭೇಟಿ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments