Publish Date: Sun, 09 Sep 2018 (19:30 IST)
Updated Date: Sun, 09 Sep 2018 (19:33 IST)
ರಾಜ್ಯದಲ್ಲಿ ಸುರಿದ ನಿರಂತರ ಮಳೆ ಹಲವು ಅವಘಡ ಹಾಗೂ ಜೀವ ಹಾನಿಗೆ ಕಾರಣವಾಗಿದೆ. ಅಲ್ಲದೇ ಅಪಾರ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೆಚ್.ಡಿ.ಕೆ, ದೆಹಲಿಗೆ ದೌಡಾಯಿಸಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾಸ್ವಾಮಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಸರ್ವ ಪಕ್ಷಗಳ ನಿಯೋಗದೊಂದಿಗೆ ಪ್ರಧಾನಿ ಯವರನ್ನು ಭೇಟಿ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಈಚೆಗೆ ಸುರಿದ ಭಾರಿ ಮಳೆ ಅಪಾರ ನಷ್ಟಕ್ಕೆ, ಸಾವು ನೋವಿಗೆ ಕಾರಣವಾಗಿದೆ. ಹೀಗಾಗಿ ಪ್ರವಾಹ ಪರಿಸ್ಥಿತಿಯನ್ನು ಪಿಎಂಗೆ ಮನವರಿಕೆ ಮಾಡಿಕೊಟ್ಟು, ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವನ್ನು ನೀಡುವಂತೆ ಕೋರಲಾಗುತ್ತಿದೆ.